Thursday, 22 March 2012

ದ್ವಿಜ ಉವಾಚ


ನನ್ನ ತಮ್ಮ ತೆಗೆದ ಈ ಅತ್ಯದ್ಭುತವಾದ ಛಾಯಾಚಿತ್ರಕ್ಕೆ  ನನ್ನ ಕವನ. 
 
 
 
ಹಕ್ಕಿ ತಾನು ಹಾರುವುದ ಮರೆತು
ಬಂದಿಲ್ಲಿ ಕುಳಿತಿದೆ
ತನಗೆ ತಿಳಿದ ಚಿಲಿಪಿಲಿಯ
ಹಾಡಲಿಲ್ಲಿ ಬಯಸಿದೆ

ರೆಕ್ಕೆಯುಂಟು ಹಾರಬಲ್ಲೆ
ಅಳೆಯ ಬಹುದು ಇಳೆಯನು
ಸಲ್ಲದು ನನಗದು;
ಸಾಗಬೇಕಿದೆ ಸತ್ಯದ ಕಡೆಗೆ!

ರವಿ,ಚಂದ್ರರ ನೋಡಬಲ್ಲೆ
ತಿಳಿಯುವುದು ಹಗಲಿರುಳು
ಒಲ್ಲೆ ಇರುಳ ಜೀವನ;
ಕಾಣ ಬಯಸುವೆ ಹಗಲನು

ಕಟ್ಟಿಗೆಯಿಂದ ಕಾಯವ ಸುಡುವರು
ತೆನೆಯು ತನುವ ಸಾಗಿಸುವುದು
ಮರಣದ ಚಿಂತೆಯಾಕೆ ?
ಮೃತ್ಯುವ ಮರೆತು ಜೀವಿಸೋಣ!

2 ಜನ ಸ್ಪಂದಿಸಿರುವರು:

shivu.k said...

ಚಿತ್ರಕ್ಕೆ ಸೊಗಸಾದ ಕವನ.
ನಿಮಗೂ ಉಗಾದಿ ಹಬ್ಬದ ಶುಭಾಶಯಗಳು.

sunaath said...

ಸುಂದರವಾದ ಚಿತ್ರಕ್ಕೆ ಸುಂದರವಾದ ಕವನ.ಯುಗಾದಿಯ ಶುಭಾಶಯಗಳು. ಹೊಸ ಸಂವತ್ಸರ ನಿಮಗೆ ಸುಖ,ಶಾಂತಿ ಹಾಗೂ ಯಶಸ್ಸನ್ನು ತರಲಿ.